ದೆಹಲಿ: NSE ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ

Prasthutha|

ನವದೆಹಲಿ: 2018 ರ ಬೋರ್ಸ್ ಮ್ಯಾನಿಪ್ಯುಲೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಷನಲ್ ಸ್ಟಾಕ್ ಎಕ್ಸ್ ಚೇಂಜ್ (NSE) ಮಾಜಿ ಸಿಇಒ, ನಿರ್ದೇಶಕರಾದ ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಬಂಧಿಸಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ NSE ಗ್ರೂಪ್’ನ ಮಾಜಿ ಸಿಬ್ಬಂದಿ ಆನಂದ್ ಸುಬ್ರಮಣಿಯನ್ ಅವರನ್ನು ಬಂಧಿಸಿದ ಕೆಲವು ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಚಿತ್ರಾ ರಾಮಕೃಷ್ಣ ಅವರು ‘ಹಿಮಾಲಯನ್ ಯೋಗಿ’ ಎಂಬಾತನೊಂದಿಗೆ ಷೇರುಗಳ ಬಗ್ಗೆ ಗೌಪ್ಯ ಮಾಹಿತಿ ಹಂಚುವಿಕೆ ಮತ್ತು ಸುಬ್ರಮಣಿಯನ್ನು ಅವರನ್ನು ಕಂಪೆನಿಯ ನಿಯಮ ಉಲ್ಲಂಘಿಸಿ ನೇಮಿಸಿದ್ದಾರೆ ಎಂಬ ಆರೋಪದಲ್ಲಿ ಸಿಬಿಐ ಬಂಧಿಸಿದೆ ಎಂದು ಹೇಳಲಾಗಿದೆ.

ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಬಂಧನವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಸಾರ್ವಜನಿಕ ನಿಧಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಚಿತ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.



Join Whatsapp