ಪಾಕ್ ಮಾಜಿ ಸಚಿವ ಖುರೇಷಿಗೆ 5 ವರ್ಷ ಚುನಾವಣಾ ಸ್ಪರ್ಧೆ ನಿಷೇಧ

Prasthutha|

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್‌ ಖುರೇಷಿ ಅವರನ್ನು ಐದು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಪಾಕಿಸ್ತಾನದ ಚುನಾವಣಾ ಆಯೋಗ ಅನರ್ಹಗೊಳಿಸಿದೆ.

- Advertisement -

ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಆಪ್ತರೂ ಆಗಿರುವ ಖುರೇಷಿ, ದೇಶದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ್ದ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಇದೇ ಪ್ರಕರಣದಲ್ಲಿ ಇಮ್ರಾನ್‌ ಅವರಿಗೂ 10 ವರ್ಷ ಜೈಲು ವಿಧಿಸಲಾಗಿದೆ.

ಅಪರಾಧ ಸಾಬೀತಾಗಿರುವ ಯಾವುದೇ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಆದ್ದರಿಂದ ಖುರೇಷಿ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ ಎಂದು ಮಾಧ್ಯಮಗಳ ವರದಿ ಮಾಡಿವೆ.

- Advertisement -

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಇದೇ 8 ರಂದು ನಡೆಯಲಿದೆ.



Join Whatsapp