ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ದೇಶದ ಗೌಪ್ಯತೆ ಸೋರಿಕೆಗೆ ಸಂಬಂಧಿಸಿದ ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರಿಕ್ – ಇ – ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಉಪಾಧ್ಯಕ್ಷ( ಶಾ ಮಹಮೂದ್) ಖುರೇಷಿ ಅವರಿಗೆ ತಲಾ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಕ್ಷದ ವಕ್ತಾರರು ಎಎಫ್‌ಪಿಗೆ ತಿಳಿಸಿದ್ದಾರೆ.
ಸಾರ್ವತ್ರಿಕ ಚುನಾವಣೆ ಹೊಸ್ತಿಲಲ್ಲಿ ಇರುವ ಪಾಕಿಸ್ತಾನದಲ್ಲಿ ಪಿಟಿಐ ಪಕ್ಷದ ದಿಗ್ಗಜ ನಾಯಕರು ಜೈಲು ಸೇರುವಂತಾಗಿದ್ದು, ರಾಜಕೀಯವಾಗಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.