ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

Prasthutha|

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆಗೆ ಅಲ್ಲಿನ ಸುಪ್ರೀಂ ಕೋರ್ಟ್ ಆದೇಶಿಸಿದೆ.

- Advertisement -

ಇಮ್ರಾನ್ ಖಾನ್ ಬಂಧನವನ್ನು “ಕಾನೂನುಬಾಹಿರ” ಎಂದು ಹೇಳಿರುವ ನ್ಯಾಯಾಲಯ ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಇಮ್ರಾನ್ ಖಾನ್ ಅವರನ್ನು ಬುಧವಾರ ಬಂಧನ ಮಾಡಲಾಗಿತ್ತು. ಅವರನ್ನು “ತಕ್ಷಣ” ಬಿಡುಗಡೆ ಮಾಡುವಂತೆ ಆದೇಶಿಸಲಾಗಿದೆ. ಅವರನ್ನು ನಾಳೆ ಇಸ್ಲಾಮಾಬಾದ್ ಹೈಕೋರ್ಟ್‌ಗೆ ಕರೆತರುವಂತೆ ಆದೇಶಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Join Whatsapp