ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ

Prasthutha|

ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಮ್ರಾನ್ ಖಾನ್ ಅವರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಲ್ಲದೆ, ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

- Advertisement -

ತಹ್ರೀಕೆ ಇ ಇನ್ಸಾಫ್ ಪಕ್ಷದ ಮುಖ್ಯಸ್ಥರಾಗಿರುವ ಇಮ್ರಾನ್ ಖಾನ್, ಪಾಕ್ ಸರಕಾರದ ವಿರುದ್ಧ ಇಸ್ಲಾಮಾಬಾದ್ ಗೆ ಪ್ರತಿಭಟನಾ ರ್ಯಾಲಿ ಹೊರಟಿದ್ದ ವೇಳೆ ಗುಜ್ರಾನ್ ವಾಲಾ ಎಂಬಲ್ಲಿ ಇಮ್ರಾನ್ ಖಾನ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇಮ್ರಾನ್ ಖಾನ್ ಅವರ ಬೆಂಗಾವಲು ವಾಹನಗಳ ಮೇಲೆ ದಾಳಿ ನಡೆದಿದ್ದು, ಇಮ್ರಾನ್ ಖಾನ್ ಕಾಲಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Join Whatsapp