ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್’ಗೆ ಪತಿ ವಿಯೋಗ

Prasthutha|

ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್ ಪಾಟೀಲ್ ಅವರ ಪತಿ ದೇವಿಸಿಂಗ್ ರಣಸಿಂಗ್ ಪಾಟೀಲ್ (88) ಅವರು ಶುಕ್ರವಾರ ನಿಧನರಾಗಿದ್ದಾರೆ.

- Advertisement -

ದೇವಿಸಿಂಗ್ ಅವರು ಫೆ.12 ರಂದು ತನ್ನ ಪುಣೆಯ ನಿವಾಸದಲ್ಲಿ ಕುಸಿದುಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಆ ಬಳಿಕ ಅವರಿಗೆ ಬೇರೆ ಬೇರೆ ತೊಂದರೆಗಳು ಕಾಣಿಸಿಕೊಂಡಿದ್ದವು. ಇಂದು ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ.
ಮೃತರು ಪತ್ನಿ ಪ್ರತಿಭಾ ದೇವಿ ಸಿಂಗ್ ಪಾಟೀಲ್, ಪುತ್ರ, ಕಾಂಗ್ರೆಸ್ ನಾಯಕ ರಾಜೇಂದ್ರ ಸಿಂಗ್ ಶೆಖಾವತ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Join Whatsapp