Home ಟಾಪ್ ಸುದ್ದಿಗಳು ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್’ಗೆ ಪತಿ ವಿಯೋಗ

ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್’ಗೆ ಪತಿ ವಿಯೋಗ

ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್ ಪಾಟೀಲ್ ಅವರ ಪತಿ ದೇವಿಸಿಂಗ್ ರಣಸಿಂಗ್ ಪಾಟೀಲ್ (88) ಅವರು ಶುಕ್ರವಾರ ನಿಧನರಾಗಿದ್ದಾರೆ.

ದೇವಿಸಿಂಗ್ ಅವರು ಫೆ.12 ರಂದು ತನ್ನ ಪುಣೆಯ ನಿವಾಸದಲ್ಲಿ ಕುಸಿದುಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಆ ಬಳಿಕ ಅವರಿಗೆ ಬೇರೆ ಬೇರೆ ತೊಂದರೆಗಳು ಕಾಣಿಸಿಕೊಂಡಿದ್ದವು. ಇಂದು ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ.
ಮೃತರು ಪತ್ನಿ ಪ್ರತಿಭಾ ದೇವಿ ಸಿಂಗ್ ಪಾಟೀಲ್, ಪುತ್ರ, ಕಾಂಗ್ರೆಸ್ ನಾಯಕ ರಾಜೇಂದ್ರ ಸಿಂಗ್ ಶೆಖಾವತ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Join Whatsapp
Exit mobile version