ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆಸ್ಪತ್ರೆಗೆ ದಾಖಲು

Prasthutha|

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

- Advertisement -


ಪ್ರತಿಭಾ ಪಾಟೀಲ್ ಅವರು ಜ್ವರ ಮತ್ತು ಎದೆ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಪಾಟೀಲ್ (89) ಅವರನ್ನು ಬುಧವಾರ ಭಾರತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಕಳೆದ ವರ್ಷ ಫೆಬ್ರವರಿಯಲ್ಲಿ ಮಾಜಿ ರಾಷ್ಟ್ರಪತಿ ಪಾಟೀಲ್ ಅವರ ಪತಿ ದೇವಿಸಿಂಗ್ ಶೇಖಾವತ್ ಅವರು ಹೃದಯಾಘಾತದಿಂದ 89 ನೇ ವಯಸ್ಸಿನಲ್ಲಿ ನಿಧನರಾಗಿದ್ದರು. ಪಾಟೀಲ್ ಅವರು 2007 ರಿಂದ 2012 ರವರೆಗೆ ಸೇವೆ ಸಲ್ಲಿಸಿದ ಭಾರತದ ಗೌರವಾನ್ವಿತ ಸ್ಥಾನವನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಇತಿಹಾಸವನ್ನು ನಿರ್ಮಿಸಿದರು.



Join Whatsapp