Home ಟಾಪ್ ಸುದ್ದಿಗಳು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಡೆಂಗ್ಯೂ: ವೈದ್ಯರಿಂದ ಮಾಹಿತಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗೆ ಡೆಂಗ್ಯೂ: ವೈದ್ಯರಿಂದ ಮಾಹಿತಿ

ದೆಹಲಿ: ಅನಾರೋಗ್ಯದಿಂದ ದೆಹಲಿಯ ಏಮ್ಸ್ ಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇದೆ ಎಂದು ಏಮ್ಸ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಆದರೆ ಅಪಾಯವಿಲ್ಲ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮನಮೋಹನ್ ಸಿಂಗ್ ಅವರಿಗೆ ಬುಧವಾರ ರಾತ್ರಿ ಜ್ವರ, ಸುಸ್ತು ಕಾಣಿಸಿಕೊಂಡಿತ್ತು. ಅದಾದ ನಂತರ ಅವರನ್ನು ಏಮ್ಸ್ ನ ಕಾರ್ಡಿಯೋ-ನ್ಯೂರೋ ಸೆಂಟರ್ ನಲ್ಲಿರುವ ಖಾಸಗಿ ವಾರ್ಡ್ ಗೆ ದಾಖಲಿಸಲಾಗಿತ್ತು. ಹೃದ್ರೋಗ ತಜ್ಞರು ನಿಗಾವಹಿಸಿದ್ದರು. ಇದೀಗ ಅವರಲ್ಲಿ ಡೆಂಗ್ಯೂ ಇರುವುದು ಗೊತ್ತಾಗಿದ್ದು, ವೈದ್ಯ ನಿತೀಶ್ ನಾಯಕ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Join Whatsapp
Exit mobile version