ಚಂಡೀಗಢ: ಪಂಜಾಬ್ ವಿಧಾನಸಭಾ ಮಾಜಿ ಸ್ಪೀಕರ್ ನಿರ್ಮಲ್ ಸಿಂಗ್ ಕಹ್ಲೋನ್(79) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಪಂಜಾಬ್ ನ ಹಲವು ರಾಜ್ಯ ನಾಯಕರು ನಿರ್ಮಲ್ ಸಿಂಗ್ ಅವರ ಸಾವಿಗೆ ಸಂತಾಪ ಸೂಚಿಸಿದ್ದು, ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ , ಅಕಾಲಿದಳದ ನಾಯಕ ಮತ್ತು ಮಾಜಿ ಸ್ಪೀಕರ್ ನಿರ್ಮಲ್ ಸಿಂಗ್ ಕಹ್ಲೋನ್ ಅವರ ನಿಧನದ ಬಗ್ಗೆ ತಿಳಿದು ದುಃಖವಾಗಿದೆ. ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮೂಲಕ ದುಖಃ ಹಂಚಿಕೊಂಡಿದ್ದಾರೆ.
ಕಹ್ಲೋನ್ ಅವರು ನೀಡುತ್ತಿದ್ದ ಸಲಹೆಗಳನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಟ್ವೀಟ್ ಮಾಡಿದ್ದಾರೆ.