ಕೋರ್ಟ್‌ ಆದೇಶ ಧಿಕ್ಕರಿಸಿದ ಆರೋಪ: ದ.ಆಫ್ರಿಕಾ ಮಾಜಿ ಅಧ್ಯಕ್ಷರಿಗೆ 15 ತಿಂಗಳು ಜೈಲು

Prasthutha|

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್‌ ಜುಮಾ(79) ಅವರಿಗೆ ಸುಪ್ರೀಂಕೋರ್ಟ್‌ 15 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

- Advertisement -

ಅವರ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರ, ಲಂಚ ಆರೋಪ ಕುರಿತು ತನಿಖೆ ನಡೆಸುತ್ತಿರುವ ವಿಚಾರಣಾ ಆಯೋಗದ ಮುಂದೆ ಹಾಜರಾಗುವಂತೆ ಸೂಚಿಸಿದ್ದರೂ, ಹಾಜರಾಗದೆ ಕೋರ್ಟ್‌ ಆದೇಶ ಧಿಕ್ಕರಿಸಿದ ಹಿನ್ನೆಲೆಯಲ್ಲಿ ಅವರಿಗೆ ಈ ಶಿಕ್ಷೆ ವಿಧಿಸಲಾಗಿದೆ.

ಯಾವ ಕಾರಣಕ್ಕೂ ಮಾಜಿ ಅಧ್ಯಕ್ಷರಿಗೆ ವಿಧಿಸಿದ ಶಿಕ್ಷೆಯನ್ನು ರದ್ದು ಮಾಡುವುದಿಲ್ಲ ಎಂದೂ ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ರಾಷ್ಟ್ರದ ಬೊಕ್ಕಸವನ್ನು ಲೂಟಿ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಹೀಗಾಗಿ 2 ವರ್ಷ ಜೈಲು ಶಿಕ್ಷೆ ವಿಧಿಸಬೇಕು ಎಂದು ನ್ಯಾಯಾಲಯಕ್ಕೆ ವಿಚಾರಣಾ ಆಯೋಗ ಮನವಿ ಮಾಡಿತ್ತು.



Join Whatsapp