ಕೋಲಾರ: ಮಾಜಿ ಸ್ಪೀಕರ್ ಹಾಗೂ ಮಾಜಿ ಸಚಿವ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಕಳೆದ ಎರಡು ತಿಂಗಳಿನಿಂದ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಹೆಚ್ವಿನ ಚಿಕಿತ್ಸೆಗಾಗಿ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಸಾವನ್ನಪ್ಪಿದ್ದಾರೆ. ಮೃತರು ಪತಿ, ಪುತ್ರಿ, ಪುತ್ರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.