ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವು ಪ್ರಕರಣ; ಆರುಮುಗಸ್ವಾಮಿ ಸಮಿತಿಯ ಆರೋಪ ತಳ್ಳಿಹಾಕಿದ ಶಶಿಕಲಾ

Prasthutha|

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಾವು ಪ್ರಕರಣಕ್ಕೆ ಸಂಬಂಧಿಸಿ ವೈದ್ಯಕೀಯ ಸಿಬ್ಬಂದಿ ಸಹಿತ ಮೂವರ ವಿರುದ್ಧ ತನಿಖೆಗೆ ಕರೆ ನೀಡಿರುವ ನ್ಯಾ. ಆರುಮುಗಸ್ವಾಮಿ ಸಮಿತಿಯ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ ಶಶಿಕಲಾ ಅವರು ವರದಿಯಲ್ಲಿನ ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

- Advertisement -

ಈ ಬಗ್ಗೆ  ಪ್ರತಿಕ್ರಿಯಿಸಿರುವ ಶಶಿಕಲಾ, ವರದಿಯಲ್ಲಿ ನನ್ನ ವಿರುದ್ಧ ಮಾಡಲಾಗಿರುವ ಎಲ್ಲಾ ಆರೋಪಗಳನ್ನು ನಾನು ನಿರಾಕರಿಸುತ್ತೇನೆ. ಜಯಲಲಿತಾ ಅವರ ವೈದ್ಯಕೀಯ ಚಿಕಿತ್ಸೆಯಲ್ಲಿ ನಾನು ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಈ ಬಗ್ಗೆ ತನಿಖೆ ಎದುರಿಸಲು ನಾನು ಸಿದ್ಧನಿದ್ದೇನೆಎಂದು ಹೇಳಿದರು.



Join Whatsapp