ಟಾಟಾ ಗ್ರೂಪ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಮೃತ್ಯು

Prasthutha|

ಮುಂಬೈ: ಟಾಟಾ ಗ್ರೂಪ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಅವರಿಗೆ 54 ವರ್ಷ ವಯಸ್ಸಾಗಿತ್ತು. ಮಿಸ್ತ್ರಿ ಅವರು ಮಧ್ಯಾಹ್ನ 3.15ರ ಸುಮಾರಿಗೆ ಅಹಮದಾಬಾದ್ ನಿಂದ ಮುಂಬೈಗೆ ಮರ್ಸಿಡಿಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇದೊಂದು ಅಪಘಾತದಂತೆ ಕಾಣುತ್ತಿದೆ ಎಂದು ಪಾಲ್ಘರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಹೇಳಿದ್ದಾರೆ.

ಕಾರು ಚಾಲಕ ಸೇರಿದಂತೆ ಇತರ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಎಲ್ಲ ವ್ಯಕ್ತಿಗಳನ್ನು ಗುಜರಾತ್ ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ವಿವರಗಳನ್ನು ಗಾಯಾಳುಗಳಿಂದ ಪಡೆಯಲಾಗುವುದು ಎಂದು ಎಸ್ಪಿ ಪಾಟೀಲ್ ಹೇಳಿದರು.

- Advertisement -

ಕಾಸಾ ಪೊಲೀಸ್ ಠಾಣೆ ವ್ಯಾಪ್ತಿಯ ಸೂರ್ಯ ನದಿ ಸೇತುವೆಯ ಚರೋಟಿ ನಾಕಾದಲ್ಲಿ ಅಪಘಾತ ಸಂಭವಿಸಿದೆ ಎಂದು ಕಾಸಾ ಪೊಲೀಸ್ ಠಾಣಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಿಸ್ತ್ರಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸಾ ಗ್ರಾಮೀಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Join Whatsapp