ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಪುತ್ರಿ ಕೆ.ಕವಿತಾ ಬಂಧನ

Prasthutha|

ಹೈದರಾಬಾದ್: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಬಂಧಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಈ ಬಂಧನ ನಡೆದಿದೆ.

- Advertisement -

ಇಂದು ಹೈದರಾಬಾದ್‌ನಲ್ಲಿರುವ ಎಂಎಲ್ ಸಿಯೂ ಆಗಿರುವ ಕೆ. ಕವಿತಾ ನಿವಾಸದ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಕೆಲವು ಗಂಟೆಗಳ ನಂತರ ಕೆಸಿಆರ್ ಪುತ್ರಿಯನ್ನು ಬಂಧಿಸಿದ್ದು, ಅವರನ್ನು ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.

44 ವರ್ಷದ ಕೆ ಕವಿತಾ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿದೆ ಮತ್ತು ಅವರ ಹೇಳಿಕೆಯನ್ನು ದಾಖಲಿಸಿದೆ. ಆದರೆ ಈ ವರ್ಷ ಇಡಿ ನೀಡಿದ್ದ ಎರಡು ಸಮನ್ಸ್‌ಗಳನ್ನು ಅವರು ತಪ್ಪಿಸಿದ್ದರು.

- Advertisement -

ಈ ಬಗ್ಗೆ ಪ್ರತಿಕ್ರಿಯಿಸಿದ ಕವಿತಾ ಅವರ ಸಹೋದರ ಹಾಗೂ ತೆಲಂಗಾಣ ಮಾಜಿ ಸಚಿವ ಕೆಟಿ ರಾಮರಾವ್, ಶೋಧ ಕಾರ್ಯ ಮುಗಿದಿದೆ ಮತ್ತು ಬಂಧನ ವಾರಂಟ್ ಅನ್ನು ಪ್ರಸ್ತುತಪಡಿಸಲಾಗಿದೆ. ಆದರೆ ಕವಿತಾ ಟ್ರಾನ್ಸಿಟ್ ವಾರಂಟ್ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ

Join Whatsapp