ನಾರಾಯಣ ಗುರುಗೆ ಅವಮಾನ: ಪಾದಯಾತ್ರೆಗೆ ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಕರೆ

Prasthutha|

ಪೂಜಾರಿಯವರ ಎಲ್ಲಾ ನಿರ್ಧಾರಕ್ಕೆ ಬೆಂಬಲವಿದೆ ಎಂದು ಕೋಟ

- Advertisement -

ಮಂಗಳೂರು: ನಾರಾಯಣ ಗುರು ಸ್ತಬ್ಧ ಚಿತ್ರಕ್ಕೆ ಕೇಂದ್ರ ಸರ್ಕಾರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಅವಕಾಶ ನಿರಾಕರಿಸಿರುವುದನ್ನು ಖಂಡಿಸಿರುವ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಕೇಂದ್ರ ಸರ್ಕಾರದ ವಿರುದ್ಧ ಪಾದಯಾತ್ರೆ ನಡೆಸುವಂತೆ ಕರೆ ನೀಡಿದ್ದಾರೆ.

ದ.ಕ. ಮಾಜಿ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಬಿಜೆಪಿ ದ.ಕ ಜಿಲಾಧ್ಯಕ್ಷ ಸೇರಿದಂತೆ ನಿಯೋಗವೊಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯನ್ನು ಭೇಟಿ ಮಾಡಿ ಈ ಸಂಬಂಧ ಚರ್ಚೆ ನಡೆಸಿದರು.

- Advertisement -

ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಟಾ ಶ್ರೀನಿವಾಸ ಪೂಜಾರಿ, ಜನವರಿ 26 ರಂದು ಕುದ್ರೋಳಿ ಕ್ಷೇತ್ರದಲ್ಲಿ ಯಾವುದೇ ಸಭೆ ಸಮಾರಂಭ ನಡೆಸುವುದು ಸೇರಿದಂತೆ ಜನಾರ್ದನ ಪೂಜಾರಿ ಅವರ ಎಲ್ಲ ನಿರ್ಣಯಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಜನಾರ್ದನ ಪೂಜಾರಿ ಅವರ ಬಗ್ಗೆ ವಿಶೇಷ ಗೌರವ ಇಟ್ಟಿದ್ದಾರೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.



Join Whatsapp