ಮಾಜಿ ಕೇಂದ್ರ ಸಚಿವ ಪಂಡಿತ್ ಸುಖರಾಮ್ ನಿಧನ

Prasthutha|

ಶಿಮ್ಲಾ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಂಡಿತ್ ಸುಖ್ ರಾಮ್ ನಿಧನರಾಗಿದ್ದಾರೆ ಎಂದು ಅವರ ಮೊಮ್ಮಗ ಹೇಳಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

- Advertisement -

ಸುಖ್ ರಾಮ್ ಅವರು ಮೇ 4 ರಂದು ಮನಾಲಿಯಲ್ಲಿ ಬ್ರೈನ್ ಸ್ಟ್ರೋಕ್ಗೆ ಒಳಗಾಗಿದ್ದರು, ನಂತರ ಅವರನ್ನು ಹಿಮಾಚಲದ ಮಂಡಿಯಲ್ಲಿರುವ ಪ್ರಾದೇಶಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ಶನಿವಾರ ವಿಮಾನದ ಮೂಲಕ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (AIIMS) ದಾಖಲಿಸಲಾಗಿತ್ತು.

ಹಿಮಾಚಲ ಪ್ರದೇಶದ ಕಾಂಗ್ರೆಸ್ ನಾಯಕ, ಸುಖ್ ರಾಮ್ ಅವರ ಮೊಮ್ಮಗ ಆಶ್ರಯ್ ಶರ್ಮಾ ಅವರು ಬುಧವಾರ ತಡರಾತ್ರಿ ಫೇಸ್ಬುಕ್ ಪೋಸ್ಟ್ ಮಾಡಿದ್ದಾರೆ. ಆದರೆ, ಅವರು ಯಾವಾಗ ಕೊನೆಯುಸಿರೆಳೆದರು ಎಂಬುದನ್ನು ಪೋಸ್ಟ್ ನಲ್ಲಿ ಉಲ್ಲೇಖಿಸಿಲ್ಲ.

Join Whatsapp