ಅಂಬೇಡ್ಕರ್ ಬಗ್ಗೆ ಅವಹೇಳನ: ವಿಹೆಚ್ ಪಿ ಮಾಜಿ ನಾಯಕ ಅರೆಸ್ಟ್

Prasthutha|

ಚೆನ್ನೈ: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಮತ್ತು ತಿರುವಳ್ಳುವರ್ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ ವಿಎಚ್ಪಿ ಮಾಜಿ ನಾಯಕ ಮಣಿಯನ್ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

- Advertisement -


ಕಳೆದ ಸೋಮವಾರ ಚೆನ್ನೈನ ಟಿ.ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸನಾತನ ಧರ್ಮವನ್ನು ಎತ್ತಿ ಹಿಡಿದ ಮಣಿಯನ್, ಅಂಬೇಡ್ಕರ್ ಹಾಗೂ ತಿರುವಳ್ಳುವರ್ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದರು. ಇದಲ್ಲದೆ ಅವರು ಪರಿಶಿಷ್ಟ ಜಾತಿ ಸಮುದಾಯದ ಜನರ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಅವರ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟೀಕೆಗೆ ಗುರಿಯಾಗಿತ್ತು.