Home ಟಾಪ್ ಸುದ್ದಿಗಳು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (80) ಗುರುವಾರ ನಿಧನರಾದರು. ವೃದ್ಧಾಪ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಬೆಳಗ್ಗೆ ನಿಧನರಾದರು.


ಇವರು 2000ರಿಂದ 2011ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗಿದ್ದರು.


2011ರಲ್ಲಿ ಭಟ್ಟಾಚಾರ್ಯ ನೇತೃತ್ವದ ಸಿಪಿಐ(ಎಂ) ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿತು. ಈ ಮೂಲಕ ಎಡರಂಗದ 34 ವರ್ಷಗಳ ಆಡಳಿತ ಕೊನೆಗೊಂಡಿತು. ಆಗ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿಯಿತು.


ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ ಎಂದು ಪಶ್ಚಿಮ ಬಂಗಾಳದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ತಿಳಿಸಿದ್ದಾರೆ.

Join Whatsapp
Exit mobile version