ಮಂಗಳೂರು: ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಾಣವಾಗುತ್ತಿರುವ ಕೇಂದ್ರ ಮಾರುಕಟ್ಟೆಯ ನಿರ್ಮಾಣ ಕಾಮಗಾರಿಗೆ ಭಾನುವಾರ ಸಂಜೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಪಾಲಿಕೆಯ ಕಾಪೋರೇಟರ್’ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಇತರರು, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಅರುಣ್ ಪ್ರಭಾ, ಲಿಂಗೇಗೌಡ ಇದ್ದರು.
ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಕದ್ರಿ ಉದ್ಯಾನವನದ ರಸ್ತೆ ಹಾಗೂ ಉದ್ಯಾನವನದ ಆವರಣದ ಹೊರಗೆ ಸಮಗ್ರ ಅಭಿವೃದ್ಧಿ, ಸುಲ್ತಾನ್ ಬತ್ತೇರಿ ಪ್ರದೇಶದಲ್ಲಿ ಪಾದಚಾರಿ ಸಮುದ್ರ-ನದಿ ಸಂಪರ್ಕ ಸೇತುವೆ ನಿರ್ಮಾಣ ಯೋಜನೆ, ಜಲಾಭಿಮುಖ ಪ್ರದೇಶ ಅಭಿವೃದ್ಧಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಕೇಂದ್ರ ಮಾರುಕಟ್ಟೆಗೆ ಮಾ.5ರ ಭಾನುವಾರ ಸಂಜೆ ಶಂಕುಸ್ಥಾಪನೆ ನೆರವೇರಿಸಿ ನಂತರ ಸಭಾ ಕಾರ್ಯಕ್ರಮವನ್ನು ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ವೇದಿಕೆ ಕಾರ್ಯಕ್ರಮವನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್,ಮೇಯರ್ ಜಯಾನಂದ ಅಂಚನ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರು, ಉಪ ಮೇಯರ್ ಪೂರ್ಣಿಮಾ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಕಾರ್ಪೋರೇಟರ್’ಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಇತರೆ ಜನಪ್ರತಿನಿಧಿಗಳು ಉದ್ಘಾಟಿಸಿದರು.