ಬೀದರ್: ಬೀದರ್ನ ಐತಿಹಾಸಿಕ ಮುಹಮ್ಮದ್ ಗವಾನ್ ಮದ್ರಸಾದೊಳಗೆ ನುಗ್ಗಿ ದಾಂಧಲೆ ನಡೆಸಿದ ಸಂಘಪರಿವಾರದ ಸುಮಾರು 60 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಶುಕ್ರವಾರ ಮುಸ್ಲಿಂ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ ಬಳಿಕ ಪೊಲೀಸರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಸಂಘಪರಿವಾರದ ಕಾರ್ಯಕರ್ತರು ಮದ್ರಸಾದೊಳಗೆ ನುಗ್ಗುತ್ತಿರುವ ಫೋಟೊಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪೊಲೀಸರ ಪ್ರಕಾರ, ಬೀದರ್ನಲ್ಲಿ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಂಘಪರಿವಾರದ ಕಾರ್ಯಕರ್ತರು ಬುಧವಾರ ರಾತ್ರಿ ಮುಹಮ್ಮದ್ ಗವಾನ್ ಮದ್ರಸಾದ ಆವರಣದೊಳಗೆ ನುಗ್ಗಿ ಪೂಜೆ ಸಲ್ಲಿಸಿದ್ದಾರೆ. ಸ್ಥಳೀಯರು ನೀಡಿದ ದೂರಿನ ನಂತರ, ಘಟನೆಗೆ ಸಂಬಂಧಿಸಿದಂತೆ 60 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.