ವೈಯಕ್ತಿಕ ದ್ವೇಷಕ್ಕೆ ಶಾಲೆಯಲ್ಲೇ ಬಾಂಬ್ ಸಿಡಿಸಿದ ಬಾಲಕರು: ನಾಲ್ವರ ಬಂಧನ

Prasthutha|

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24-ಪರಗಣ ಜಿಲ್ಲೆಯ ತಿಟಗಢದ ಶಾಲೆಯೊಂದರಲ್ಲಿ ಶನಿವಾರ ನಡೆದ ಕಚ್ಚಾ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ನಾಲ್ವರು ಹದಿಹರೆಯದ ಬಾಲಕರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

18-19 ವರ್ಷ ವಯಸ್ಸಿನ ಆರೋಪಿಗಳನ್ನು ಮಧ್ಯರಾತ್ರಿ ಕಮರ್ಹಾಟಿ ಮತ್ತು ತಿಟಗಢ ಪ್ರದೇಶಗಳಿಂದ ಬಂಧಿಸಲಾಗಿದೆ ಎಂದು ಬ್ಯಾರಕ್‌ಪೋರ್ ಪೊಲೀಸ್ ಕಮಿಷನರೇಟ್‌ನ ಅಧಿಕಾರಿ ತಿಳಿಸಿದ್ದಾರೆ. ಬಂಧಿತರ ಪೈಕಿ ಮೂವರು ಅದೇ ಶಾಲೆಯ ಹಳೆ ವಿದ್ಯಾರ್ಥಿಗಳಾಗಿದ್ದಾರೆ.

ಶನಿವಾರ ತರಗತಿಗಳು ನಡೆಯುತ್ತಿರುವಾಗ ಶಾಲೆಯ ಕಟ್ಟಡದ ಮೇಲ್ಛಾವಣಿಯ ಮೇಲೆ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಮೂರು ಅಂತಸ್ತಿನ ಕಟ್ಟಡದ ಮೊದಲ ಎರಡು ಮಹಡಿಯಲ್ಲಿರುವ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದ್ದ ಕಾರಣ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಆರೋಪಿಗಳು ಮತ್ತು ಶಾಲೆಯ ಇತರ ಕೆಲವು ವಿದ್ಯಾರ್ಥಿಗಳ ನಡುವಿನ ವೈಯಕ್ತಿಕ ದ್ವೇಷವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

Join Whatsapp