ಮಂಗಳೂರು | ಕಾರ್ಖಾನೆಯಲ್ಲಿ ಸಾವು ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ

Prasthutha|

ಮಂಗಳೂರು: ಬಜ್ಪೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಐವರು ಸಾವನ್ನಪ್ಪಿದ ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಎನ್. ಮಾಹಿತಿ ನೀಡಿದ್ದಾರೆ.

- Advertisement -


ಈ ಪ್ರಕರಣದಲ್ಲಿ ಮೀನು ಸಂಸ್ಕರಣಾ ಘಟಕದ ಮಾಲೀಕರು ಸೇರಿದಂತೆ ನಾಲ್ವರ ಮೇಲೆ IPC 304ರ ಅಡಿಯಲ್ಲಿ, ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳದೇ ಕೆಲಸ ಮಾಡಿಸಿರುವ ಹಿನ್ನೆಲೆಯಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸದ್ಯಕ್ಕೆ ನಾಲ್ಕು ಜನರನ್ನು ವಶಕ್ಕೆ ಪಡೆಯಲಾಗಿದೆ. ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್, ಸೂಪರ್ ವೈಸರ್ ಮುಹಮ್ಮದ್ ಅನ್ವರ್, ಫಾರೂಕ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.

ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯವರನ್ನು ಬರಲು ಹೇಳಿದ್ದೇವೆ. ಗಂಭೀರ ಪ್ರಕರಣವಾಗಿರುವುದರಿಂದ ಎಲ್ಲಾ ರೀತಿಯಲ್ಲೂ ತನಿಖೆ ಮಾಡಲಾಗುವುದು ಎಂದು ತಿಳಿಸಿದರು.



Join Whatsapp