ಬೆಂಗಳೂರು: ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರ ಬಂಧನ

Prasthutha|

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನೇನು ಆರು ದಿನಗಳು ಬಾಕಿಯಿರುವಾಗಲೇ ಮತದಾರರಿಂದ ಗುರುತಿನ ಚೀಟಿ ಸಂಗ್ರಹಿಸುತ್ತಿದ್ದ ನಾಲ್ವರನ್ನು ಫ್ಲೈಯಿಂಗ್ ಸ್ಕ್ವಾಡ್​​​, ಭಾರತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಬಳಿ ಹೋಗಿ ನಿಮ್ಮ ಒಂದು ವೋಟರ್​ ಐಡಿಗೆ 2 ಸಾವಿರ ರೂ. ಹಣ ಕೊಡುತ್ತೇವೆ ಎಂದು ಹೇಳಿ ವೋಟರ್ ಐಡಿ ಸಂಗ್ರಹಿಸುತ್ತಿದ್ದರು. ಈ ಸಂಬಂಧ ಶಿವಾಜಿನಗರ ಕಾಂಗ್ರೆಸ್ ಕಾರ್ಯಕರ್ತ ದೂರು ನೀಡಿದ್ದು, ದೂರಿನ ಮೇರೆಗೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ 15ಕ್ಕೂ ಹೆಚ್ಚು ವೋಟರ್ ಐಡಿ, ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.