ಸಕಲೇಶಪುರ | ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ವಿರುದ್ಧ ಕೇಸ್

Prasthutha|

ಸಕಲೇಶಪುರ : ಜನಪ್ರಿಯ ಪ್ರವಾಸಿ ತಾಣ ಪಟ್ಲ ಬೆಟ್ಟದಲ್ಲಿ ಬೈಕ್ ನಲ್ಲಿ ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -


ತಾಲ್ಲೂಕಿನ ವನಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರವಾಸಿ ತಾಣ ಪಟ್ಲಬೆಟ್ಟದಲ್ಲಿ ಜೂನ್ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತೊಕ್ಕೋಟು ಊರಿನ ಪ್ರವಾಸಿಗರಾದ ಭುವಿತ್ ಪೂಜಾರಿ ಹಾಗೂ ಎಂಟು ಸಂಗಡಿಗರು ತಮ್ಮ ಬೈಕ್ ಗಳಲ್ಲಿ ಪಟ್ಲ ಬೆಟ್ಟಕ್ಕೆ ಹೋಗಿ ಹಿಂತಿರುಗಿ ಬರುವಾಗ ಈ ಘಟನೆ ನಡೆದಿದೆ.


ಬಾಡಿಗೆ ಜೀಪಿನಲ್ಲೇ ಹೋಗಬೇಕು ಬೇರೆ ವಾಹನಗಳನ್ನು ಬಿಡುವುದಿಲ್ಲ ಎಂದು ಜೀಪುಗಳ ಚಾಲಕರು ಬೈಕ್ ಸವಾರರ ಜೊತೆ ಮಾತಿನ ಚಕಾಮುಕಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಲವರು ಏಕಾಎಕಿ ಬೈಕ್ ಸವಾರ ಭುವಿತ್ ಪೂಜಾರಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಯಳು ಭುವಿತ್ ಪೂಜಾರಿ ನೀಡಿದ ದೂರಿನ ಆಧಾರದಲ್ಲಿ ಗಗನ್, ಕಿರಣ್, ನಿಶಾಂತ್, ಮದನ್ ಎಂಬುವವರ ಮೇಲೆ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp