ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್: ನಾಲ್ವರು ಸಜೀವ ದಹನ

Prasthutha|

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾದ ಘಟನೆ ನಡೆದಿದೆ.

- Advertisement -


ವರದಿಗಳ ಪ್ರಕಾರ, ಪುಣೆಯ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದ್ದು, ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ.


ದುರಂತ ಸಂಭವಿಸಿದ ಕೂಡಲೇ ಅಲ್ಲಿದ್ದವರು ಸ್ಥಳೀಯ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಜನರು ಸಂತ್ರಸ್ತರನ್ನು ರಕ್ಷಿಸಲು ಪ್ರಯತ್ನಿಸಿದರು ಆದರೆ ಬೆಂಕಿಯಿಂದಾಗಿ ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ ನಂತರ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.
ಮೃತ ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದುರಂತದ ಬಗ್ಗೆ ಅವರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ.

- Advertisement -