ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ನಾಲ್ವರು ಕಾಂಗ್ರೆಸ್ ಸಂಸದರ ಅಮಾನತು

Prasthutha|

- Advertisement -

ನವದೆಹಲಿ: ಮುಂಗಾರು ಅಧಿವೇಶನದ ಕಲಾಪಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ ನಾಲ್ವರು ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಓಮ್ ಬಿರ್ಲಾ ಅವರು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ್ದಾರೆ.

ಪ್ರತಿಪಕ್ಷದ ಸದಸ್ಯರು ಸೋಮವಾರ ಧರಣಿ ನಡೆಸಿ, ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದ್ದರಿಂದ ಸ್ಪೀಕರ್ ಅವರು ಕಾಂಗ್ರೆಸ್ ಸಂಸದರಾದ ಮಾಣಿಕಂ ಟ್ಯಾಗೋರ್, ಟಿ.ಎನ್ ಪ್ರತಾಪನ್, ಜೋತಿಮಣಿ ಮತ್ತು ರಮ್ಯಾ ಹರಿದಾಸ್ ಅವರನ್ನು ಅಮಾನತುಗೊಳಿಸಿದ್ದಾರೆ.

- Advertisement -

ಈ ನಿಟ್ಟಿನಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ನಾಲ್ವರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಿದರು. ಈ ಸಂಸದರು ಸಭಾಪತಿಯ ಅಧಿಕಾರದ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸಿದ್ದಾರೆ ಎಂದು ಜೋಶಿ ಹೇಳಿದರು. ಬಳಿಕ ಸ್ಪೀಕರ್ ನಿರ್ಣಯ ಪ್ರಕಟಿಸಿ, ನಾಲ್ವರನ್ನು ಅಮಾನತುಗೊಳಿಸುವುದಾಗಿ ತಿಳಿಸಿದರು.

ಸದನದ ಹೊರಗೆ ಅಮಾನತುಗೊಂಡ ನಾಲ್ವರು ಸಂಸದರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆಯ ಕಾಂಗ್ರೆಸ್ ಉಪ ನಾಯಕ ಗೌರವ್ ಗೊಗೊಯ್, ಬೆಲೆಯೇರಿಕೆಯಂತಹ ಜನರ ಸಮಸ್ಯೆಗಳ ಕುರಿತು ಪ್ರಶ್ನಿಸುತ್ತಿರುವ ಪ್ರತಿಪಕ್ಷಗಳನ್ನು ಬೆದರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ನಮ್ಮ ಸಂಸದರನ್ನು ಅಮಾನತುಗೊಳಿಸುವ ಮೂಲಕ ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದೆ. ಅವರ ತಪ್ಪೇನು? ಅವರು ಜನರಿಗೆ ಮುಖ್ಯವಾದ ಸಮಸ್ಯೆಗಳನ್ನು ಪ್ರಶ್ನಿಸುವುದು ತಪ್ಪೇ ಎಂದು ಪ್ರಶ್ನಿಸಿದರು.

Join Whatsapp