ಪಾಟ್ನಾ: ಮೋದಿ ಅವರು 2014ರ ಲೋಕಸಭೆ ಚುನಾವಣೆಗಾಗಿ ಪ್ರಚಾರ ನಡೆಸುತ್ತಿದ್ದ ವೇಳೆ ಪಾಟ್ನಾ ಗಾಂಧಿ ಮೈದಾನದಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಸಂಬಂಧ ವಿಶೇಷ ರಾಷ್ಟ್ರೀಯ ತನಿಖಾ ದಳ ಕೋರ್ಟ್ ಇಂದು 9 ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರಿಗೆ ಮರಣದಂಡನೆ, ಇಬ್ಬರಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಓರ್ವನಿಗೆ 7 ವರ್ಷ ಶಿಕ್ಷೆಯನ್ನು ಕೋರ್ಟ್ ಘೋಷಿಸಿದೆ.