ರಾಂಚಿ: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಆರೋಪಿಗಳ ಹುಡುಕಾಟದ ವೇಳೆ ಪೊಲೀಸರು ನಡೆಸಿದ ದಾಳಿಯಲ್ಲಿ ನಾಲ್ಕು ದಿನದ ಶಿಶು ಮೃತಪಟ್ಟಿರುವ ಘಟನೆ ನಡೆದಿದೆ.
ನ್ಯಾಯಾಲಯ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಅವರ ಮನೆ ಮೇಲೆ ದಾಳಿ ನಡೆಸಿದ್ದರು.
ನಾಲ್ಕು ದಿನದ ಶಿಶುವಿನ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದೆ ಎಂದು ಉಲ್ಲೇಖಿಸಿಲಾಗಿದೆ.
ಸಂಗಮ್ ಪಾಠಕ್ ಮತ್ತು ಎಸ್.ಕೆ ಮಂಡಲ್ ಸೇರಿದಂತೆ ಗಿರಿದಿಹ್’ನ ಡಿಯೋರಿ ಪೊಲೀಸ್ ಠಾಣೆಯ ಆರು ಪೊಲೀಸರ ವಿರುದ್ಧ ಎಫ್‌ಐಆ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಇವರಲ್ಲಿ ಐವರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.