ಕಾರು – ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ

Prasthutha|

ಕಲಬುರಗಿ, ಜು.20: ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೋಟನೂರ ಬಳಿ ತಡರಾತ್ರಿ ನಡೆದಿದೆ.

- Advertisement -


ಮೃತರನ್ನು ಉಲ್ಲಾಸ್ (28), ರಾಹುಲ್ (24), ಕಾಶಿ (26) ಎಂದು ಗುರುತಿಸಲಾಗಿದ್ದು, ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಮೃತರು ಕಲಬುರಗಿ ನಿವಾಸಿಗಳಾಗಿದ್ದು, ಜೇವರ್ಗಿ ಮಾರ್ಗದಿಂದ ಕಲಬುರಗಿಗೆ ಇಟೋಸ್ ಕಾರಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿದ ಸ್ಥಳೀಯರು ಹಾಗೂ ನಗರ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

- Advertisement -


ಕಲಬುರಗಿ ನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Join Whatsapp