ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್ ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ.
ಶುಕ್ರವಾರ ಅರ್ಕಾನ್ಸಾಸ್ ನ ಬೆಂಟನ್ ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.
ಅಪಘಾತದ ತೀವ್ರತೆಗೆ SUV ಕಾರು ಹೊತ್ತಿ ಉರಿಯಿತು. ಪರಿಣಾಮ ಕಾರಿನಲ್ಲಿದ್ದವರು ಸುಟ್ಟು ಕರಕಲಾಗಿದ್ದಾರೆ. ಮೃತರ ಗುರುತುಗಳನ್ನು ಖಚಿತಪಡಿಸಲು ಅಧಿಕಾರಿಗಳು ಡಿಎನ್ ಎ ಪರೀಕ್ಷೆ ಮಾಡಿಸಿದ್ದಾರೆ.
ಮೃತರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ.
ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ಘಟಿಕೋತ್ಸವಕ್ಕಾಗಿ ಅವರ ಪೋಷಕರು ಮೇ ತಿಂಗಳಲ್ಲಿ ಯುಎಸ್ ನಲ್ಲಿದ್ದರು. ಘಟಿಕೋತ್ಸವದ ನಂತರ ಅವರು ಭಾರತಕ್ಕೆ ಮರಳುವುದಿತ್ತು ಎಂದು ಸಂಬಂಧಿಕರು ಹೇಳಿಕೊಂಡಿದ್ದಾರೆ.