ಲಂಚಕ್ಕೆ ಬೇಡಿಕೆಯಿಟ್ಟು ಕೇರಳದಲ್ಲಿ ಅರೆಸ್ಟ್ ಆಗಿರುವ ನಾಲ್ವರು ಪೊಲೀಸರು ಅಮಾನತು

Prasthutha|

ಬೆಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟು ಕೇರಳ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬೆಂಗಳೂರಿನ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಇನ್ ಸ್ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ ಸ್ಟೇಬಲ್ ಗಳಾದ ವಿಜಯ್ ಕುಮಾರ್, ಶಿವಾನಿ, ಕಾನ್ ಸ್ಟೇಬಲ್ ಸಂದೇಶ್ ಅಮಾನತುಗೊಂಡಿದ್ದಾರೆ. ಎಸಿಪಿ ವರದಿ ಆಧರಿಸಿ ಈ ನಾಲ್ವರನ್ನೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅಮಾನತುಗೊಳಿಸಿದ್ದಾರೆ.

- Advertisement -


ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್ ವೇರ್ ಇಂಜಿನಿಯರ್ ಬಳಿ ಆನ್ ಲೈನ್ ಮೂಲಕ 26 ಲಕ್ಷ ರೂ. ಹಣವನ್ನು ಪಡೆದು ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್ ಠಾಣೆಗೆ ದೂರು ಕೊಟ್ಟಿದ್ದರು.


ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಮಡಿಕೇರಿಯ ಆರೋಪಿ ಐಸಾಕ್ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್ ನಲ್ಲಿ ಎರಡು ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿತ್ತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಳಮಶ್ಶೇರಿಗೆ ಹೋಗಿದ್ದರು. ಅಲ್ಲಿ ಆರೋಪಿಗಳಾದ ನೌಶಾದ್ ಹಾಗೂ ಅಕೀಲ್ ಎಂಬುವವರಿಂದ ಆನ್ ಲೈನ್ ಫ್ರಾಡ್ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನೆಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು. ಬಿಡುಬೇಕಾದರೆ 25 ಲಕ್ಷಕ್ಕೆ ಮೊದಲು ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ. ಆ ಬಳಿಕ ಆರೋಪಿಗಳಿಂದ 3,95,000 ಹಣ ಪಡೆದಿದ್ದರು. ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ, ಕೇರಳದ ಕಳಮಶ್ಶೇರಿ ಪೊಲೀಸರಿಗೆ ಆರೋಪಿಗಳ ಕುಟುಂಬಸ್ಥರು ದೂರು ನೀಡಿದ್ದರು. ಈ ದೂರಿನನ್ವಯ ಕೊಚ್ಚಿಯ ಕಳಮಶ್ಶೇರಿ ಪೊಲೀಸರು, ಆರೋಪಿಗಳಿಂದ ಹಣ ವಸೂಲಿ ಮಾಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ವೈಟ್ಫೀಲ್ಡ್ನ ಸೆನ್ ಪೊಲೀಸ್ ಠಾಣೆಯ ಎಸ್ ಐ ಹಾಗೂ ಮೂವರು ಕಾನ್ಸ್ಟೆಬಲ್ ಸಹಿತ ನಾಲ್ವರನ್ನು ಬಂಧಿಸಲಾಗಿತ್ತು.



Join Whatsapp