ಪಾದಚಾರಿಗಳ ಮೇಲೆ ಹರಿದ ಬೈಕ್: ನಾಲ್ವರು ಸಾವು

Prasthutha|

ವಿಜಯಪುರ: ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಅಪಘಾತ ಸಂಭವಿಸಿದೆ.

- Advertisement -


ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ.


ಅನಿಲ ಖೈನೂರ (23), ಚೌಡಕಿ (22), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಮೃತ ದುರ್ದೈವಿಗಳಾಗಿದ್ದಾರೆ.

- Advertisement -


ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು ಸೇರಿ ಒಟ್ಟು ನಾಲ್ವರು ಯುವಕರ ಮೃತಪಟ್ಟಿದ್ದಾರೆ.


ಮೂವರಿಗೆ ಗಂಭೀರ ಗಾಯಗಳಾಗಿವೆ. ನಿನ್ನೆ ರಾತ್ರಿ 11 ಗಂಟೆಗೆ ಘಟನೆ ನಡೆದಿದೆ. ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ.



Join Whatsapp