ಬ್ರಿಡ್ಜ್’ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

Prasthutha|

ಕೊಪ್ಪಳ: ಬ್ರಿಡ್ಜ್’ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕುಕನೂರು ತಾಲ್ಲೂಕಿನ ಬನ್ನಿಕೊಪ್ಪದ ಬಳಿ ನಡೆದಿದೆ.

- Advertisement -


ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಇದ್ದು, ಇವರೆಲ್ಲರೂ ತೆಲಂಗಾಣದವರು ಎಂದು ಕುಕನೂರು ಪೊಲೀಸರು ಮಾಹಿತಿ ನೀಡಿದ್ದಾರೆ.


ಜಿಲ್ಲೆಯಿಂದ ಗದಗ ಮಾರ್ಗದಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

Join Whatsapp