KSRTC ಬಸ್​​​ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಮೃತ್ಯು

Prasthutha|

ಮಂಡ್ಯ: KSRTC ಬಸ್​​​ಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.

- Advertisement -

ರಸ್ತೆ ಬದಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​​​ಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರು ಮೃತಪಟ್ಟಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಬೆಳ್ಳೂರು ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp