ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ನಾಲ್ವರು ಸಾವು

Prasthutha|

ವಿಜಯಪುರ : ಕೆಟ್ಟು ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೃತರು ಕಾರಲ್ಲಿದ್ದ ಮೂವರು, ಲಾರಿ ಚಾಲಕ ಎಂದು ತಿಳಿದುಬಂದಿದೆ.

- Advertisement -


ಕಾರಿನಲ್ಲಿದ್ದ ವಿಜಯಪುರ ನಗರ ಮೂಲದ ವ್ಯಕ್ತಿ, ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು ಸದ್ಯಕ್ಕೆ ಅವರ ಹೆಸರುಗಳು ತಿಳಿದುಬಂದಿಲ್ಲ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.


ಲಾರಿ ಕೆಟ್ಟಿದ್ದು ಅದನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಚಾಲಕ ದುರಸ್ತಿ ಕಾರ್ಯದಲ್ಲಿ ನಿರತನಾಗಿದ್ದ. ಈ ವೇಳೆ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರ ಹೆಸರು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.



Join Whatsapp