ಲಾರಿ, ಕಾರು ನಡುವೆ ಭೀಕರ ಅಪಘಾತ: ನಾಲ್ವರು ಮೃತ್ಯು

Prasthutha|

ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸಾವಿಗೀಡಾದ ಘಟನೆ ಚಿಕ್ಕಬೆನ್ನೂರು ಬಳಿ ನಡೆದಿದೆ.

- Advertisement -

ಮೃತರನ್ನು ಬೆಂಗಳೂರಿನ ಥಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ (30), ಹರ್ಷಿತಾ (28), ನೋಹನ್ (2) ಹಾಗೂ ವಿಜಯರೆಡ್ಡಿ ಎಂದು ಗುರುತಿಸಲಾಗಿದೆ.


ಬೆಂಗಳೂರಿನಿಂದ ಗೋವಾಕ್ಕೆ ಫಾರ್ಚುನರ್ ಕಾರಿನಲ್ಲಿ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಮಗು ಹಾಗೂ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

Join Whatsapp