ಕುಸಿದು ಬಿದ್ದ ಲಿಫ್ಟ್: ನಾಲ್ವರು ಮೃತ್ಯು, ಐವರ ಸ್ಥಿತಿ ಗಂಭೀರ

Prasthutha|

ನೋಯ್ಡಾ: ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಬಿದ್ದು, 4 ಮಂದಿ ಮೃತಪಟ್ಟು, ಐವರಿಗೆ ಗಾಯಗಳಾದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

- Advertisement -


ಮೃತಪಟ್ಟವರೂ ಮತ್ತು ಗಾಯಾಳುಗಳ ಕೂಲಿಕಾರ್ಮಿಕರಾಗಿದ್ದಾರೆ.ಎಲ್ಲಾ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


ಗ್ರೇಟರ್ ನೋಯ್ಡಾದಲ್ಲಿ ಶುಕ್ರವಾರ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ನೆಲಕ್ಕೆ ಕುಸಿಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗ್ರೇಟರ್ ನೋಯ್ಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ವರ್ಮಾ ತಿಳಿಸಿದ್ದಾರೆ.