ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು

Prasthutha|

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -


ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಮತ್ತು ನೇಪಾಳಿ ಪ್ರಜೆ ಸೇರಿದ್ದಾರೆ ಎಂದು ತಿಳಿದು ಬಂದಿದೆ.


ಅಪಘಾತವಾದ ಕೂಡಲೇ ಸ್ಥಳಕ್ಕಾಗಮಿಸಿದ ಜುಬ್ಬಲ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ರಾಜೀವ್ ಸಂಖಾಯನ್, ಘಟನೆಯ ಸಮಯದಲ್ಲಿ ಬಸ್ನಲ್ಲಿ 7 ಪ್ರಯಾಣಿಕರಿದ್ದರು. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಗಾಯಗೊಂಡಿರುವ ಇತರ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದೆ.



Join Whatsapp