Home ಟಾಪ್ ಸುದ್ದಿಗಳು ಬಸ್-ಕಾರು ನಡುವೆ ಅಪಘಾತ: ನಾಲ್ವರು ಮೃತ್ಯು

ಬಸ್-ಕಾರು ನಡುವೆ ಅಪಘಾತ: ನಾಲ್ವರು ಮೃತ್ಯು

ಮೈಸೂರು: ಖಾಸಗಿ ಬಸ್ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಸಂಭವಿಸಿ ಕನಿಷ್ಠ ನಾಲ್ವರು ಮೃತಪಟ್ಟಿರುವ ಘಟನೆ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.


ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ.


ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version