ಕೇರಳದಲ್ಲಿ ಸಂಗೀತ ಕಾರ್ಯಕ್ರಮ ವೇಳೆ ಕಾಲ್ತುಳಿತ: ನಾಲ್ವರು ಸಾವು

Prasthutha|

ಕೊಚ್ಚಿ: ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಇಂದು ಸಂಜೆ ಟೆಕ್ ಫೆಸ್ಟ್ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿದೆ. ಬಯಲು ರಂಗಮಂದಿರದಲ್ಲಿ ನಿಖಿತಾ ಗಾಂಧಿ ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಇದರಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸುದ್ದಿ ಹೊರಬಂದಿದೆ. ಅಲ್ಲದೆ, ಕನಿಷ್ಠ 40 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

- Advertisement -

ಗಾಯಗೊಂಡವರನ್ನು ಕಲಮಸ್ಸೆರಿಯ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ. ಗಾಯಗೊಂಡವರಲ್ಲಿ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ತಿಳಿದು ಬಂದಿದೆ.

ಹಠಾತ್ ಮಳೆಯ ನಂತರ ವಿದ್ಯಾರ್ಥಿಗಳು ಸಭಾಂಗಣದೊಳಗೆ ಓಡಿದ್ದರಿಂದಾಗಿ ಕಾಲ್ತುಳಿತ ಸಂಭವಿಸಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.




Join Whatsapp