ಪುಣೆ: ನಗರದಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬುಧವಾರ ಬೆಳಗ್ಗೆ ಪೂರ್ಣನಗರ ಚಿಂಚ್ ವಾಡ್ ನಲ್ಲಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುತ್ತಮುತ್ತಲಿನ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಬಳಿಕ ಬೆಂಕಿಯನ್ನು ನಿಯಂತ್ರಿಸುವಲ್ಲಿ ಸಿಬ್ಬಂದಿ ಯಶಸ್ವಿಯಾದರು. ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬರಬೇಕಿದೆ.