ವಿಜಯಪುರ: ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತ ದುರ್ದೈವಿಗಳು.
ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಗೆ ದೇವಸ್ಥಾನಕ್ಕೆ ಹೊರಟಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.