ಕಡಬದಲ್ಲಿ ಭೀಕರ ಅಪಘಾತ: ನಾಲ್ವರು ಮೃತ್ಯು

Prasthutha|

ಕಡಬ: ತೂಫಾನ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕಡಬ ಸಮೀಪದ ನೆಟ್ಟಣ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

- Advertisement -


ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.

ಕಾರು ಸುಬ್ರಹ್ಮಣ್ಯಕ್ಕೆ ತೆರಳುತ್ತಿತ್ತು. ತೂಫಾನ್ ವಾಹನ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ನೆಟ್ಟಣದ ಬಿಳಿಮಲೆ ಎಂಬಲ್ಲಿ ಈ ದುರಂತ ಸಂಭವಿಸಿದೆ.

- Advertisement -

10 ವರ್ಷದ ಬಾಲಕ, ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಮೃತಪಟ್ಟವರು ಎಂದು ತಿಳಿದುಬಂದಿದೆ. ಅವರ ಹೆಸರು ಇನ್ನೂ ತಿಳಿದುಬಂದಿಲ್ಲ. ಗಂಭೀರ ಗಾಯಗೊಂಡ ಓರ್ವನನ್ನು ಪುತ್ತೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತದೇಹಗಳನ್ನು ಕಡಬ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Join Whatsapp
Exit mobile version