ತಾಯಿಫ್: ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ಹಳೆಯಂಗಡಿ ಮೂಲದ ದಂಪತಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಸೌದಿ ಅರೇಬಿಯಾದ ತಾಯಿಫ್ ನಲ್ಲಿ ನಡೆದಿದೆ.
ಮೃತರನ್ನು ಹಳೆಯಂಗಡಿ ತೋಕೂರು ನಿವಾಸಿ ಶಮೀಮ್ ಮತ್ತು ಝರೀನಾ ದಂಪತಿಯ ಪುತ್ರಿ ಹಿಬಾ ( 29) ಆಕೆಯ ಪತಿ ಮುಹಮ್ಮದ್ ರಮೀಝ್ (34) ಮಕ್ಕಳಾದ ಆರೂಶ್ (3) ಮತ್ತು ರಾಹ ( 3 ತಿಂಗಳು) ಎಂದು ಗುರುತಿಸಲಾಗಿದ್ದು, ಅದೇ ಕಾರಿನಲ್ಲಿದ್ದ ಹಿಬಾ ಅವರ ಸಹೋದರಿ ಶಬ್ನಮ್ ಎಂಬವರ ಮಗಳು ಫಾತಿಮಾ (19) ಗಂಭೀಯ ಗಾಯಗೊಂಡಿದ್ದು, ಆಕೆಯನ್ನು ರಿಯಾದ್ ನ ಆಸ್ಪತ್ರೆಯಲ್ಲಿ ಚಿಕಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕಾರು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯಿಂದ ಹಲವು ಮೀಟರ್ ಗಳಷ್ಟು ದೂರಕ್ಕೆ ಹಾರಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಕತಾರ್ ನಿಂದ ಸೌದಿ ಅರೇಬಿಯಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ಮಕ್ಕಳೊಂದಿಗೆ ದಂಪತಿ ತೆರಳುತ್ತಿದ್ದಾಗ ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಅಫಘಾತ ತಾಯಿಫ್ ನಿಂದ ಸುಮಾರು 160 ಕಿಲೋ ಮೀಟರ್ ದೂರಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.