ಕುತ್ತಾರಿನಲ್ಲಿ ಗೋಡೆ ಕುಸಿದು ನಾಲ್ವರ ಸಾವು ಪ್ರಕರಣ: ಸ್ಥಳಕ್ಕೆ ಸ್ಪೀಕರ್‌, ಡಿಸಿ ಭೇಟಿ

Prasthutha|

ಮಂಗಳೂರು: ಕುತ್ತಾರಿನ ಮದನಿ ನಗರದಲ್ಲಿ ಇಂದು ಮುಂಜಾನೆ ಒಂದೇ ಕುಟುಂಬದ ನಾಲ್ವರು ಗೋಡೆ ಕುಸಿದು ಸಾವನ್ನಪ್ಪಿದ್ದು, ಸ್ಪೀಕರ್‌ ಯು.ಟಿ. ಖಾದರ್‌ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್‌ ಯು.ಟಿ. ಖಾದರ್‌, ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಂಥಹ ದುರ್ಘಟನೆಗಳಲ್ಲಿ ಪರಿಹಾರ ನೀಡುವುದಕ್ಕೆ ಸರ್ಕಾರದ ಮಾನದಂಡ ಮತ್ತು ನಿಯಮಗಳಿವೆ. ಮನೆ ಕುಸಿತಗೊಂಡಿದೆ. ಅದಕ್ಕೂ ಸರ್ಕಾರದ ಪರಿಹಾರವಿದೆ. ಆದರೆ, ಈ ದುರಂತವನ್ನು ವಿಶೇಷವಾಗಿ ಪರಿಗಣಿಸಿ ಸರ್ಕಾರದ ಕಡೆಯಿಂದ ಹೆಚ್ಚಿನ ಸಹಾಯ ಮಾಡುವುದಕ್ಕೆ ಪ್ರಯತ್ನಿಸಲಾಗುವುದು. ಪರಿಹಾರ ಸೇರಿ ಎಲ್ಲ ವಿಚಾರಗಳ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

Join Whatsapp