ಮಾರ್ಚ್’ನಲ್ಲಿ ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಪ್ರಾರಂಭ: ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ಮಾರ್ಚ್’ನಲ್ಲಿ ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -


ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ಗುರುವಾರ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ನಡೆಸಿದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಯೋಜನೆಗಳಲ್ಲಿ ಮರಳು, ಜಲ್ಲಿ ಮತ್ತಿತರ ಸಾಮಗ್ರಿಗಳ ಮೇಲಿನ ರಾಯಲ್ಟಿ ವಿನಾಯಿತಿ ಹಾಗೂ ಜಿ.ಎಸ್.ಟಿ. ರಿಯಾಯಿತಿ ನೀಡುವುದರ ಜೊತೆಗೆ ಭೂಸ್ವಾಧೀನ ವೆಚ್ಚ ರಾಜ್ಯ ಸರ್ಕಾರ ಭರಿಸುವುದರಿಂದ ವಿನಾಯಿತಿ ನೀಡುವ ಕುರಿತು ಒಪ್ಪಂದ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.


ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಟೆಂಡರ್ ಮಾಡಲಾಗಿದೆ. ಮಾರ್ಚ್ ನಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. 10 ಸಾವಿರ ಕೋಟಿ ರೂ. ಅಂದಾಜು ವೆಚ್ಚದ ಸುರಂಗ ಮಾರ್ಗ ಯೋಜನೆಯ ವಿನ್ಯಾಸ ಸಿದ್ಧಪಡಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.



Join Whatsapp