Home ಟಾಪ್ ಸುದ್ದಿಗಳು ಬೈಕ್ ಗೆ ಖಾಸಗಿ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ದುರ್ಮರಣ

ಬೈಕ್ ಗೆ ಖಾಸಗಿ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ದುರ್ಮರಣ

ಚಿತ್ರದುರ್ಗ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ನಾಗರಾಜ (46), ಶೈಲಜಾ (43), ಸಂತೋಷ (16), ವಿರೇಶ (13) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ಬರಮಣ್ಣನಕಾಯಕ ದುರ್ಗಾ ನಿವಾಸಿಗಳಾಗಿದ್ದು, ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ವಾಪಸ್ ಬರುವಾಗ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಬಳಿ ಬುಧವಾರ ರಾತ್ರಿ 10 ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ತಂದೆ-ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

Join Whatsapp
Exit mobile version