ಒಂದೇ ಕುಟುಂಬದ ನಾಲ್ವರು ಹತ್ಯೆ: ಇಬ್ಬರ ಬಂಧನ

Prasthutha|

ಕಾರವಾರ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ನಾಲ್ವರನ್ನು ಅಟ್ಟಾಡಿಸಿ ಕತ್ತಿಯಿಂದ ಕಡಿದು ಹಾಕಿರುವಂಥ ಸನ್ನಿವೇಶ ಕಂಡುಬಂದಿದೆ.
ಶಂಭು ಭಟ್ ಅವರ ಹಿರಿಯ ಸೊಸೆ ವಿದ್ಯಾ ಭಟ್ ಕುಟುಂಬಸ್ಥರಿಂದ ಈ ಕೊಲೆ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

- Advertisement -


ಕೊಲೆಯಾದ ಶಂಭು ಭಟ್’ರಿಗೆ ಶ್ರೀಧರ್ ಭಟ್ ಎಂಬ ಮಗನಿದ್ದು ವಿದ್ಯಾ ಭಟ್’ರನ್ನು ಮದುವೆ ಆಗಿದ್ದ. ಇತ್ತಿಚಿಗೆ ಶ್ರೀಧರ್ ಭಟ್ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದು ಅವರ ಆಸ್ತಿ ವಿಚಾರಕ್ಕಾಗಿ ವಿದ್ಯಾ ಕುಟುಂಬಕ್ಕೂ ಹಾಗೂ ಶಂಭು ಭಟ್ ಕುಟುಂಬದ ಮಧ್ಯೆ ಗಲಾಟೆ ನಡೆಯುತ್ತಿತ್ತು.
ಇದೇ ಕಾರಣಕ್ಕೆ ವಿದ್ಯಾ ಭಟ್ ಹಾಗೂ ಆಕೆಯ ತಂದೆ ಸಹೋದರ ನಿನ್ನೆ ಆಗಮಿಸಿ ನಾಲ್ವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.


ಕೃತ್ಯ ನಡೆಯುವ ವೇಳೆ 10 ವರ್ಷದ ಮಗು ಪಕ್ಕದ ಮನೆಯಲ್ಲಿತ್ತು. 4 ವರ್ಷದ ಇನ್ನೊಂದು ಮಗು ಮಲಗಿದ್ದು ಹೀಗಾಗಿ ಇವರಿಬ್ಬರು ಕೊಲೆಗಟುಕರಿಂದ ಪಾರಾಗಿದ್ದಾರೆ.
ಆರೋಪಿಗಳ ಪತ್ತೆಗಾಗಿ ಭಟ್ಕಳ ಡಿವೈಎಸ್ಪಿ ಮತ್ತು ಸಿಪಿಐ ನೇತೃತ್ವದಲ್ಲಿ ರಚನೆಯಾಗಿದ್ದ ಎರಡು ವಿಶೇಷ ತಂಡಗಳು ಕಾರ್ಯಾಚರಣೆ ಕೈಗೊಂಡು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಉಳಿದ ಆರೋಪಿಗಳಿಗಾಗಿ ಹುಡುಕಾಟ ತೀವ್ರಗೊಳಿಸಿದ್ದು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp