ಅಮೆರಿಕದಲ್ಲಿ ಭಾರತೀಯ ಮೂಲದ ಒಂದೇ ಕುಟುಂಬದ ನಾಲ್ವರು ನಿಗೂಢ ಸಾವು

Prasthutha|

ವಾಷಿಂಗ್ಟನ್: ಭಾರತ ಮೂಲದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ.

- Advertisement -

ತೇಜ್ ಪ್ರತಾಪ್ ಸಿಂಗ್ (43), ಸೋನಾಲ್ ಪರಿಹಾರ್ (42) ಮತ್ತು ಈ ದಂಪತಿಯ 10 ಹಾಗೂ 6 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅನುಮಾನಾಸ್ಪದವಾಗಿ ನಾಲ್ವರ ಶವ ಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಕುಟುಂಬ ವಾಸಿಸುತ್ತಿದ್ದ ನೆರೆಹೊರೆಯವರು ಅಕ್ಟೋಬರ್ 4 ರಂದು ಸಂಜೆ ಪೊಲೀಸರಿಗೆ ಕರೆ ಮಾಡಿ, ಅವರ ಯೋಗಕ್ಷೇಮದ ಬಗ್ಗೆ ಅನುಮಾನ ಮೂಡುತ್ತಿರುವುದಾಗಿ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಅವರ ಮನೆಗೆ ತೆರಳಿ ಪರಿಶೀಲಿಸಿದಾಗ ನಾಲ್ವರು ಕೂಡಾ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

- Advertisement -

ದಂಪತಿಯಿಬ್ಬರು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು ತೇಜ್ ಪ್ರತಾಪ್ ಸಿಂಗ್ ಮೊದಲು ತನ್ನ ಕುಟುಂಬವನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.



Join Whatsapp